ಅಕ್ಟೋಬರ್ 2ರ ಗಾಂಧಿ ಜಯಂತಿಗೆ ‘ಬೇಲ್’ ಸಿನಿಮಾ ಗ್ರಾಂಡ್ ರಿಲೀಸ್.
ಅಕ್ಟೋಬರ್ 2ರ ಗಾಂಧಿ ಜಯಂತಿಗೆ ‘ಬೇಲ್’ ಸಿನಿಮಾ ಗ್ರಾಂಡ್ ರಿಲೀಸ್!
ಖ್ಯಾತ ನಿರ್ದೇಶಕ ಪವನ್ ಒಡೆಯರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ, ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್‌ನ ಬಹುನಿರೀಕ್ಷಿತ ಸಿನಿಮಾ ‘ಬೇಲ್’ ಚಿತ್ರದ ಹೊಸ ಪೋಸ್ಟರ್ ಹಾಗೂ ಬಿಡುಗಡೆ ದಿನಾಂಕ ಪ್ರಕಟವಾಗಿದೆ. ಈ ಹೊಸ ಪೋಸ್ಟರ್‌ನಲ್ಲಿ ಶಿವಣ್ಣ ಖಡಕ್ ಪೊಲೀಸ್ ಆಫೀಸರ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳಲ್ಲಿ ರೋಮಾಂಚನ ಉಂಟುಮಾಡಿದೆ. ಈ ಆಕ್ಷನ್ ಸಿನಿಮಾ ಮುಂಬರುವ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಜಗತ್ತಿನಾದ್ಯಂತ ತೆರೆಕಾಣಲಿದೆ. ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ, ಸಾಯಿ ಕುಮಾರ್ ಮತ್ತು ಸಂಜನಾ ಆನಂದ್ ಪ್ರಮುಖ ಪಾತ್ರಗಳಲ್ಲಿದ್ದಾರೆ.








