‘ಎ ಫಾರ್ ಆನಂದ್’ ಕ್ಯೂಟ್ ಪ್ರೋಮೋ ಔಟ್
‘ಎ ಫಾರ್ ಆನಂದ್’ ಕ್ಯೂಟ್ ಪ್ರೋಮೋ ಔಟ್
‘ಘೋಸ್ಟ್’ ಚಿತ್ರದ ಭರ್ಜರಿ ಯಶಸ್ಸಿನ ನಂತರ ನಿರ್ದೇಶಕ ಶ್ರೀನಿ ಹಾಗೂ ಶಿವರಾಜ್‌ಕುಮಾರ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಎರಡನೇ ಸಿನಿಮಾ ‘ಎ ಫಾರ್ ಆನಂದ್’ ಚಿತ್ರದ ಕ್ಯೂಟ್ ಪ್ರೋಮೋ ರಿಲೀಸ್ ಆಗಿದೆ. ಗೀತಾ ಶಿವರಾಜ್‌ಕುಮಾರ್ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಶಿವಣ್ಣ ಟೀಚರ್ ಪಾತ್ರದಲ್ಲಿ ಮಿಂಚಲಿದ್ದಾರೆ. ವಿಶೇಷವಾಗಿ ಬಿಡುಗಡೆಯಾಗಿರುವ ಈ ಪ್ರೋಮೋದಲ್ಲಿ ಗೀತಾ ಶಿವರಾಜ್‌ಕುಮಾರ್, ದುನಿಯಾ ವಿಜಯ್ ಹಾಗೂ ಶ್ರೀನಿ ಒಟ್ಟಿಗೆ ಕಾಣಿಸಿಕೊಂಡಿದ್ದು, ವಾಸುಕಿ ವೈಭವ್ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಶೀಘ್ರದಲ್ಲೇ ಚಿತ್ರದ ಶೂಟಿಂಗ್ ಆರಂಭವಾಗಲಿದೆ.
‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರದಿಂದ ಸ್ಪೆಷಲ್ ಮೇಕಿಂಗ್ ವಿಡಿಯೋ
ಹೃದಯಸ್ಪರ್ಶಿ ಚಿತ್ರಗಳನ್ನು ನೀಡಿದ ನಿರ್ದೇಶಕ ಹೇಮಂತ್ ಎಂ. ರಾವ್ ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಪಿರಿಯಡ್ ಆಕ್ಷನ್-ಸ್ಪೈ ಥ್ರಿಲ್ಲರ್ ಸಿನಿಮಾ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರತಂಡದಿಂದ ಶಿವಣ್ಣನಿಗೆ ವಿಶಿಷ್ಟವಾಗಿ ಶುಭಾಶಯ ಕೋರಲಾಗಿದೆ. ಚಿತ್ರದಲ್ಲಿ ಶಿವಣ್ಣ ಅವರ ಡಿಫರೆಂಟ್ ಗೆಟಪ್ ಹೊಂದಿರುವ ರೋಮಾಂಚಕ ಮೇಕಿಂಗ್ ವಿಡಿಯೋವನ್ನು ರಿಲೀಸ್ ಮಾಡಲಾಗಿದ್ದು, ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಶಿವಣ್ಣ – ಡಾಲಿ ಧನಂಜಯ್ ಜೊತೆಯಾಗಿ ನಟಿಸುತ್ತಿರುವ ಈ ಸಿನಿಮಾ ಈಗಾಗಲೇ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಕುತೂಹಲ ಮೂಡಿಸಿದೆ.








