“ಕಾಂಗರೂ” ಚಿತ್ರತಂಡದ ನೂತನ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಸಂಗೀತ ಸಂಯೋಜನೆ. .*

ಡಿಸೆಂಬರ್ 25 ರಂದು ಚನ್ನಕೇಶವ ಬಿ.ಸಿ ಕುಣಿಗಲ್ ಅವರ ನಿರ್ಮಾಣ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದ ಈ ನೂತನ ಚಿತ್ರಕ್ಕೆ ಚಾಲನೆ .

ಕಳೆದವರ್ಷ ಆದಿತ್ಯ ಅಭಿನಯದ “ಕಾಂಗರೂ” ಚಿತ್ರ ತೆರೆಕಂಡಿತ್ತು. ಈಗ ಅದೇ ತಂಡದಿಂದ ನೂತನ ಚಿತ್ರವೊಂದು ಆರಂಭವಾಗಲಿದೆ. ಡಿಸೆಂಬರ್ 25 ರಂದು ಈ ಚಿತ್ರದ ಸ್ಕ್ರಿಪ್ಟ್ ಪೂಜೆ ನಡೆದಿದೆ.

ಚೆನ್ನಕೇಶವ ಬಿ.ಸಿ.ಕುಣಿಗಲ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ, ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ಈ ಚಿತ್ರವನ್ನು ನಿರ್ಮಿಸಲು ಮುಂದಾಗಿದ್ದಾರೆ. ಕಿಶೋರ್ ಮೇಗಳಮನೆ ಕಥೆ ಮತ್ತು ಚಿತ್ರಕತೆ ಜೊತೆಗೆ ನಿರ್ದೇಶನ ಮಾಡುತ್ತಿದ್ದಾರೆ. “ಕೆ.ಜಿ.ಎಫ್” ನಂತಹ ವಿಶ್ವಪ್ರಸಿದ್ದ ಚಿತ್ರದ ಸಂಗೀತ ನಿರ್ದೇಶಕ ರವಿ ಬಸ್ರೂರ್ ಸಂಗೀತ ಸಂಯೋಜಿಸುತ್ತಿರುವ ಈ ನೂತನ ಚಿತ್ರಕ್ಕೆ ಜನಪ್ರಿಯ ಸಂಭಾಷಣೆಕಾರ ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ.

ನಮ್ಮ “ಕಾಂಗರೂ” ಚಿತ್ರಕ್ಕೆ ತಾವೆಲ್ಲಾ ‌ನೀಡಿದ ಪ್ರೋತ್ಸಾಹಕ್ಕೆ ಆಬಾರಿ. ಇಂದು ಅದೇ ತಂಡದ ಎರಡನೇ ಪ್ರಯತ್ನಕ್ಕೆ ಚಾಲನೆ ದೊರಕಿದೆ. ಈ ನೂತನ ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ನೀಡುತ್ತಿರುವುದು ಹಾಗು ಮಾಸ್ತಿ ಅವರು ಸಂಭಾಷಣೆ ಬರೆಯುತ್ತಿರುವುದು ಖುಷಿಯಾಗಿದೆ. ಸದ್ಯದಲ್ಲೇ ಶೀರ್ಷಿಕೆ ಅನಾವರಣ ಮಾಡುತ್ತೇವೆ. ಅದೇ ಸಂದರ್ಭದಲ್ಲಿ ತಾರಾಬಳಗದ ಬಗ್ಗೆ ಮಾಹಿತಿ ನೀಡುತ್ತೇವೆ ಎಂದು ನಿರ್ದೇಶಕ ಕಿಶೋರ್ ಮೇಗಳಮನೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor