ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಬೃಂದಾವಿಹಾರಿ” ಚಿತ್ರದ “ಹೇ ರಾಮ ರಾಮ” ಹಾಡು ರಾಮನವಮಿಯಂದು ಬಿಡುಗಡೆ.

ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ, ಸಮೃದ್ಧಿ ವಿ ಮಂಜುನಾಥ್ ನಿರ್ಮಾಣದ ಹಾಗೂ ಶ್ರೀನಿವಾಸರಾಜು ನಿರ್ದೇಶನದ “ಬೃಂದಾ ವಿಹಾರಿ” ಚಿತ್ರದ ಮೊದಲ ಹಾಡು ರಾಮನವಮಿ ಸಂದರ್ಭದಲ್ಲಿ ಬಿಡುಗಡೆಯಾಗಿದೆ.

ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ ” ಹೇ ರಾಮ ರಾಮ” ಎಂಬ ಸುಮಧುರ ಗೀತೆ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಗಿದೆ‌. ಹೇಶಮ್ ಅಬ್ದುಲ್ ವಹಾಬ್ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಖ್ಯಾತ ಗಾಯಕ ಅನುರಾಗ್ ಕುಲಕರ್ಣಿ ಹಾಡಿದ್ದಾರೆ. ಹಾಡು ಬಿಡುಗಡೆಯಾದ ಕ್ಷಣದಿಂದಲೇ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

ಗಣೇಶ್ ಹಾಗೂ ಶ್ರೀನಿವಾಸರಾಜು ಅವರ ಕಾಂಬಿನೇಶನ್ ನಲ್ಲಿ ಮೂಡಿಬಂದಿದ್ದ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಹಾಡುಗಳು ಬಹಳ ಜನಪ್ರಿಯವಾಗಿತ್ತು. ಆ ಚಿತ್ರದ ನಂತರ ಇವರ ಕಾಂಬಿನೇಶನ್ ನಲ್ಲಿ ಬರುತ್ತಿರುವ “ಬೃಂದಾ ವಿಹಾರಿ” ಚಿತ್ರದ ಹಾಡುಗಳು ಸಹ ಜನರ ಮೆಚ್ಚುಗೆ ಪಡೆದುಕೊಳ್ಳಲಿದೆ. ಅದಕ್ಕೆ ಈಗ ಬಿಡುಗಡೆಯಾಗಿರುವ ಮೊದಲ ಹಾಡೇ ಸಾಕ್ಷಿಯಾಗಿದೆ.

ವಿರಾಟ್ ಸಾಯಿ ಕ್ರಿಯೇಷನ್ಸ್ ಅರ್ಪಿಸುವ ಈ ಚಿತ್ರವನ್ನು ಸಮೃದ್ಧಿ ವಿ ಮಂಜುನಾಥ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶಕ ಶ್ರೀನಿವಾಸರಾಜು ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಹೇಶಮ್ ಅಬ್ದುಲ್ ವಹಾಬ್ ಸಂಗೀತ ನಿರ್ದೇಶನ ಹಾಗೂ ವೆಂಕಟ್ ಪ್ರಸಾದ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಗಣೇಶ್ ಅವರಿಗೆ ನಾಯಕಿಯರಾಗಿ ದೇವಿಕಾ ಭಟ್ ಹಾಗೂ ಮಾಳವಿಕ ಶರ್ಮ ಅಭಿನಯಿಸಿದ್ದಾರೆ. ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ “ವೃಂದಾ ವಿಹಾರಿ” ಚಿತ್ರದಲ್ಲಿದೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor