“ಡಿಡಿ ಢಿಕ್ಕಿ” ಚಿತ್ರತಂಡದಿಂದ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯ.

ಹಂಪಿ ಪಿಕ್ಚರ್ಸ್ & R K & A K ಎಂಟರ್ಟೈನ್ಮೆಂಟ್ ನಿರ್ಮಾಣದ, ರಂಜನಿ ರಾಘವನ್ ನಿರ್ದೇಶನದ “ಡಿಡಿ ಢಿಕ್ಕಿ” ಚಿತ್ರತಂಡದಿಂದ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯ.

“ನೆನಪಿರಲಿ” ಪ್ರೇಮ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಗಣೇಶ್ ಪುತ್ರ ವಿಹಾನ್. .

“ಗುರು ಶಿಷ್ಯರು”, “ಲ್ಯಾಂಡ್‌ ಲಾರ್ಡ್” ಚಿತ್ರಗಳ ನಿರ್ದೇಶಕ ಹಾಗೂ “ಕಾಟೇರ” ಚಿತ್ರದ ಲೇಖಕ ಜಡೇಶ್ ಹಂಪಿ ಅವರ ಹಂಪಿ ಪಿಕ್ಚರ್ಸ್ ಹಾಗೂ ರಾಮಕೃಷ್ಣ ಹಾಗೂ ಆನಂದ್ ಕುಮಾರ್ ನೇತೃತ್ವದ R K & A k ಎಂಟರ್ಟೈನ್ಮೆಂಟ್ ಸಂಸ್ಥೆ ನಿರ್ಮಾಣದ, ಕಲಾವಿದೆಯಾಗಿ ಜನಪ್ರಿಯರಾಗಿರುವ ರಂಜನಿ ರಾಘವನ್ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ ಹಾಗೂ “ನೆನಪಿರಲಿ” ಪ್ರೇಮ್ ನಾಯಕರಾಗಿ ನಟಿಸುತ್ತಿರುವ ಚಿತ್ರ “ಡಿಡಿ ಢಿಕ್ಕಿ”. ಗೋಲ್ಡನ್ ಸ್ಟಾರ್ ಗಣೇಶ್ ಅವರ ಪುತ್ರ ಮಾಸ್ಟರ್ ವಿಹಾನ್ ಕೂಡ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ಪ್ರಸ್ತುತ ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ.

ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ “ಡಿ ಡಿ ಢಿಕ್ಕಿ” ಚಿತ್ರತಂಡ ಸಹ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಶುಭಾಶಯ ತಿಳಿಸಿದೆ.

ಲೆಜೆಂಡ್ ಇಳಯರಾಜ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಸುಧಾಕರ್ ಅವರ ಛಾಯಾಗ್ರಹಣವಿದೆ. ಕೆ.ಎಂ.ಪ್ರಕಾಶ್ ಸಂಕಲನವಿರುವ “ಡಿಡಿ ಢಿಕ್ಕಿ” ಚಿತ್ರಕ್ಕೆ ತರುಣ್ ಸುಧೀರ್ ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor