ದಿ ರೈಸ್ ಆಫ್ ಅಶೋಕ ಟ್ರೇಲರ್ ಅನಾವರಣ…ಸತೀಶ್ ನೀನಾಸಂ ಸಿನಿಮಾಗೆ ಚಂದನವನದ ತಾರೆಯರು ಸಾಥ್

ದಿ ರೈಸ್ ಆಫ್ ಅಶೋಕ ಟ್ರೇಲರ್ ಬಿಡುಗಡೆ…ಸತೀಶ್ ನೀನಾಸಂ ಚಿತ್ರಕ್ಕೆ ಸ್ಯಾಂಡಲ್ ವುಡ್ ಸ್ಟಾರ್ಸ್ ಬೆಂಬಲ

ಟ್ರೇಲರ್ ನಲ್ಲಿ ಕಿಚ್ಚು ಹಚ್ಚಿದ ಅಶೋಕ..ಇದೇ ತಿಂಗಳ 27ಕ್ಕೆ ಸತೀಶ್ ನೀನಾಸಂ ಸಿನಿಮಾ ರಿಲೀಸ್

ಸತೀಶ್ ನೀನಾಸಂ ಅಭಿನಯ ಬಹು ನಿರೀಕ್ಷಿತ ಸಿನಿಮಾ ದಿ ರೈಸ್ ಆಫ್ ಅಶೋಕ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ ತಿಂಗಳ 27ರಂದು ಬಹು ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಈಗಾಗಲೇ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದ್ದು, ಅದರ ಭಾಗವಾಗಿ ನಿನ್ನೆ ಬೆಂಗಳೂರಿನ ಜಿಟಿ ಮಾಲ್ ನಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ದಿ ರೈಸ್ ಆಫ್ ಅಶೋಕ ಟ್ರೇಲರ್ ಲಾಂಚ್ ಈವೆಂಟ್​​ಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಸಾಥ್ ಕೊಟ್ಟರು. ರವಿಚಂದ್ರನ್​, ದುನಿಯಾ ವಿಜಯ್, ವಸಿಷ್ಠ ಸಿಂಹ, ಲೂಸ್ ಮಾದ ಯೋಗಿ, ದಿಗಂತ್, ನಾಗಭೂಷಣ್ ಮತ್ತು ಶಿವರಾಜ್ ಕೆ ಆರ್ ಪೇಟೆ ಮೊದಲಾದವರು ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಈ ವೇಳೆ ಕ್ರೇಜಿಸ್ಟಾರ್ ರವಿಚಂದ್ರನ್ ಮಾತನಾಡಿ, ಸತೀಶ್ ಚಿತ್ರದ ಟ್ರೇಲರ್, ಹಾಡು ಯಾವುದು ಕಾಣಿಸಲಿಲ್ಲ. ನಿನ್ನ ಕಣ್ಣಲ್ಲಿ ನೀರು ಕಾಣಿಸಿತು. ಅದು ಹೊರಗಡೆ ಬರಲಿಲ್ಲ. ನೀನು ಅಲ್ಲೇ ಅರ್ಧ ಗೆದ್ದಾಯ್ತು. ಗಂಡ್ಸು ಕಣ್ಣೀರು ಹಾಕಬಾರದು.‌ ಒಳಗೆ ಇಟ್ಟುಕೊಳ್ಳಬೇಕು. ಸಿನಿಮಾ ಮೇಲೆ ಪ್ರೀತಿ, ಆಸೆ, ಕನಸು ಇದೆ ಅನ್ನೋದು ನಿನ್ನ ಮಾತು, ನಿನ್ನ ಸ್ನೇಹಿತರು ಹೇಳ್ತಾರೆ. ನಿನ್ನ ಕನಸು, ಆಸೆ ನಿಜ ಆಗಲಿ. ಹೆಣ್ಮಕ್ಕಳಿಗೆ ಡೆಲಿವರಿ ನೋವು ಗೊತ್ತು. ಆದರೆ ಪ್ರತಿ ಸಿನಿಮಾ ಮಾಡುವಾಗ ಆಗುವುದು ಡೆಲಿವರಿ ನೋವೇ. ಆ ಆಪರೇಷನ್ ಮಾಡುವುದು ಪ್ರೇಕ್ಷಕರು. ಸಿಸರಿನ್ ಮಾಡುವುದು ನೀವೇ.‌ ಮೊದಲು ಆಪರೇಷನ್ ಮಾಡಿ.‌ ಮೊದಲು ಬದುಕಿಸಲು ಪ್ರಯತ್ನಿಸಿ. ಮೊದಲು ಸಿನಿಮಾ ನೋಡಿ. ಪ್ರೇಕ್ಷಕರ ಆಗಿ ಸಿನಿಮಾಗೆ ಹೋಗಿ. ವಿಮರ್ಶೆ ಮಾಡಲು ಹೋಗಬೇಡಿ. ಸಿನಿಮಾದವರು ಲೈಕ್ ಗೆ ಸಾಯುವುದನ್ನು ಬಿಡಿ. ಪ್ರೇಕ್ಷಕರನ್ನು ಸಿನಿಮಾ ಥಿಯೇಟರ್ ನಲ್ಲಿ ಸಿನಿಮಾ ನೋಡಲು ಬಿಡಿ. ಎರಡೂವರೆ ಗಂಟೆ ಅವರನ್ನು ಮೈಮರೆಸಲು ಬಿಡಿ. ಚೆನ್ನಾಗಿ ಆಗಲಿ ಎಂದು ಬಯಸುತ್ತೇವೆ. ಚೆನ್ನಾಗಿ ಮಾಡುವುದು ಸಿನಿಮಾದವರ ಕೆಲಸ. ಒಬ್ಬನಿಗೆ ನೂರು ರೂಪಾಯಿ ಕೊಟ್ಟು ಸಿನಿಮಾ ನೋಡಿ. ಒಂದಷ್ಟು ಸಿನಿಮಾ ಗೆಲ್ಸಿ ಎಂದು ಪ್ರೇಕ್ಷಕರಿಗೆ ಕಿವಿ ಮಾತು ಹೇಳಿದರು.

ನಟ ನೀನಾಸಂ ಸತೀಶ್ ಮಾತನಾಡಿ, ರವಿಚಂದ್ರನ್ ನಮಗೆ ತಂದೆ ಸಮನ. ವಿಜಿ ಸರ್ ಒಂದು ಕಾಲ್ ಗೆ ಬಂದ್ರು.‌ಯೋಗಿ ನನ್ನ ಗೆಳೆಯ. ವಸಿಷ್ಠ ಹಾರ್ಟ್ಲಿ ಮಾತನಾಡುವ ಗೆಳೆಯ. ನಾಗಭೂಷಣ್, ದಿಗ್ಗಿ, ಕೆಆರ್ ಪೇಟೆ ಎಲ್ಲರೂ ನನಗೆ ಸಪೋರ್ಟ್ ಮಾಡಲು ಬಂದಿರುವುದಕ್ಕೆ ಧನ್ಯವಾದ. ನಮ್ಮ ದಿ ರೈಸ್ ಆಫ್ ಅಶೋಕ ಸಿನಿಮಾವನ್ನು ಇದೇ ತಿಂಗಳ 27 ರಂದು ಪ್ರೇಕ್ಷಕರ ಮುಂದೆ ಇಡುತ್ತಿದ್ದೇವೆ. ನೀವು ಸಾಂಗ್ ನೋಡಿದ್ದೀರಾ? ನನ್ನ ಸ್ನೇಹಿತರು ಎಲ್ಲರೂ ಟ್ರೇಲರ್ ಲಾಂಚ್ ಗೆ ಬಂದಿದ್ದಾರೆ. ಸಪ್ತಮಿ ನನ್ನ ರೀತಿ ಚಿತ್ರದ ಹೀರೋ. ತೆಲುಗು, ತಮಿಳು ಮಾಡ್ತೀನಿ ಎಂದು ಹೇಳಿಕೊಂಡು ಬರ್ತಿದ್ದೆ. ಎಲ್ಲರೂ ಇವನಿಗೆ ಕೆಜಿಎಫ್, ಕಾಂತಾರ ಹುಚ್ಚು ಹಿಡಿದಿದೆ ಎಂದು ಮಾತನಾಡಿಕೊಂಡರು.

ನನಗೆ ಕೆಜಿಎಫ್, ಕಾಂತಾರ ಹುಚ್ಚು ಹಿಡಿದಿಲ್ಲ. ನನ್ನ ಸಿನಿಮಾದ ಹುಚ್ಚು ಅದು.‌ ನಮ್ಮ ಸಿನಿಮಾವನ್ನು ಅವರು ನೋಡಲಿ. ಮೊದಲ ಚಿತ್ರ ತೋರಿಸಿದೆ. ಸಿನಿಮಾ ಸಖತ್ ಆಗಿ ಇದೆ ಎಂದು ತೆಲುಗು, ತಮಿಳಿನಲ್ಲಿ 200 ಥಿಯೇಟರ್ ನಲ್ಲಿ ರಿಲೀಸ್ ಮಾಡುತ್ತಿದ್ದಾರೆ. ಸಿನಿಮಾ ಬಗ್ಗೆ ಜಾಸ್ತಿ ಮಾತಾನಾಡಲ್ಲ. ಇದೇ ತಿಂಗಳ 27ಕ್ಕೆ ದಿ ರೈಸ್ ಆಫ್ ಅಶೋಕ ತೆರೆಗೆ ಬರ್ತಿದೆ. ಎರಡೂವರೆ ಕಾಲ ನನ್ನ ಕಷ್ಟ ಕಾಲದಲ್ಲಿ ನಿಂತ ಎಲ್ಲರಿಗೂ ಧನ್ಯವಾದ ಎಂದರು.

ದಿ ರೈಸ್ ಆಫ್ ಅಶೋಕದಲ್ಲಿ ಸತೀಶ್​ಗೆ ಜೋಡಿಯಾಗಿ ಕಾಂತಾರ ಸಿನಿಮಾ ಖ್ಯಾತಿಯ ಸಪ್ತಮಿ ಗೌಡ ನಟಿಸಿದ್ದಾರೆ. ಬಿ.ಸುರೇಶ್, ರವಿಶಂಕರ್, ಗೋಪಾಲಕೃಷ್ಣ ದೇಶಪಾಂಡೆ, ಸಂಪತ್ ಮೈತ್ರೇಯಾ, ಯಶ್ ಶೆಟ್ಟಿ, ಡ್ರಾಗನ್ ಮಂಜು, ವಿಕ್ರಮ್ ವೇದ ಖ್ಯಾತಿಯ ಹರೀಶ್ ಪೆರಾಡಿ, ಜಗಪ್ಪ ತಾರಾಬಳಗದಲ್ಲಿದ್ದಾರೆ.

ದಿ ರೈಸ್ ಆಫ್ ಅಶೋಕ ಚಿತ್ರ ಇದೇ ತಿಂಗಳು ರಿಲೀಸ್ ಆಗುತ್ತಿದೆ. ದೊಡ್ಡಮಟ್ಟದಲ್ಲಿಯೇ ಈ ಸಿನಿಮಾ ತೆರೆಗೆ ಬರ್ತಿದೆ. ಕನ್ನಡ ಅಷ್ಟೆ ಅಲ್ಲ, ಇತರ ಭಾಷೆಯಲ್ಲೂ ಈ ಸಿನಿಮಾ ಬಿಡುಗಡೆಯಾಗುತ್ತಿದೆ.

ಈ ಚಿತ್ರ ವೃದ್ಧಿ ಕ್ರಿಯೇಷನ್ ಹಾಗೂ ಸತೀಶ್ ಪಿಕ್ಚರ್ಸ್ ಹೌಸ್ ಪ್ರೊಡಕ್ಷನ್ ನಡಿ ಮೂಡಿ‌ಬರ್ತಿದೆ. ವರ್ಧನ್ ನರಹರಿ, ಜೈಷ್ಣವಿ ಜೊತೆ ಸೇರಿ ಸತೀಶ್ ನೀನಾಸಂ ಕೂಡಾ ಸಿನಿಮಾಗೆ ಹಣ ಹಾಕಿದ್ದಾರೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor