ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಯಿತು “ಫಸ್ಟ್ ಸ್ಯಾಲರಿ” ಕಿರುಚಿತ್ರದ ಪೋಸ್ಟರ್

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಯಿತು “ಫಸ್ಟ್ ಸ್ಯಾಲರಿ” ಕಿರುಚಿತ್ರದ ಪೋಸ್ಟರ್

ಕನ್ನಡ ಚಿತ್ರರಂಗದಲ್ಲಿ ಚಿತ್ರತಂಡ ಮತ್ತು ಸಿನಿಮಾ ಪತ್ರಕರ್ತರೊಂದಿಗೆ ಸಂಪರ್ಕಕೊಂಡಿಯಾಗಿ ಕೆಲಸ ಮಾಡುತ್ತಿರುವ “ಶ್ರೀ ರಾಘವೇಂದ್ರ ಚಿತ್ರವಾಣಿ” ಸಂಸ್ಥೆಯಲ್ಲಿ ಫಸ್ಟ್ ಸ್ಯಾಲರಿ” ಕಿರುಚಿತ್ರ ನಿರ್ಮಾಣವಾಗಿದೆ.

ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಸ್ಥಾಪಕರಾದ ಡಿ.ವಿ ಸುಧೀಂದ್ರ ಅವರು ಕನ್ನಡ ಚಿತ್ರರಂಗದ ಅಗ್ರ ಸಿನಿಮಾ ಪ್ರಚಾರಕರ್ತರು. ಜೊತೆಗೆ ತಮ್ಮದೇ ಸಂಸ್ಥೆಯಿಂದ “ಒಲವಿನ ಉಡುಗೊರೆ; “ಗಣೇಶನ ಮದುವೆ”, “ಗುಂಡನ ಮದುವೆ”, “ಪಟ್ಟಣಕ್ಕೆ ಬಂದ ಪುಟ್ಟ”, “ನಗು ನಗುತಾ ನಲಿ ಚಿತ್ರಗಳನ್ನು ಪಾಲುದಾರಿಕೆಯಲ್ಲಿ ನಿರ್ಮಾಣ ಮಾಡಿದ್ದರು. ಅವರು ಕಾಲವಾದನಂತರ ಅವರ ಅಣ್ಣನ ಮಗನಾದ ಡಿ.ಜಿ. ವೆಂಕಟೇಶ್ ರವರು ಹಾಗೂ ಡಿ.ವಿ. ಸುಧೀಂದ್ರರವರ ಮಗನಾದ ಸುನೀಲ್ ಸುಧೀಂದ್ರ ರವರು ಜೊತೆಗೂಡಿ ಚಿತ್ರವಾಣಿ ಸಂಸ್ಥೆಯನ್ನು ಮುನ್ನೆಡೆಸುತ್ತಿದ್ದಾರೆ. ಜೊತೆಗೆ ಇವರ ಸಹೋದರ ಡಿ.ಜಿ. ವಾಸುದೇವ್ ಕೂಡ ಶ್ರಮವಹಿಸಿ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಈಗ ಡಿ.ವಿ. ವೆಂಕಟೇಶ್ ರವರ ಪುತ್ರ ಪವನ್ ವೆಂಕಟೇಶ್ ಕಿರು ಚಿತ್ರಕ್ಕೆ ಆಕ್ಷನ್ ಕಟ್ ಹೇಳಿರುವ “ ಫಸ್ಟ್ ಸ್ಯಾಲರಿ” ಕಿರುಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ, ಶೀರ್ಷಿಕೆ ಕೆಳಗೆ ಕನಸುಗಳ ಹಾದಿ ಎನ್ನುವ ಅಡಿಬರಹವಿದೆ. “ಫಸ್ಟ್ ಸ್ಯಾಲರಿ” ಕಿರುಚಿತ್ರದ ಪೋಸ್ಟರ್ ದೀಪಾವಳಿ ಸಂದರ್ಭದಲ್ಲಿ ಬಿಡುಗಡೆಯಾಗಿದೆ.

ಕರೋನ ಸಮಯದಲ್ಲಿ ” ಕರಾಳ ರೋಗ ನಾಶ” ಎಂಬ ಕಿರುಚಿತ್ರ ನಿರ್ದೇಶನ ಮಾಡಿ ಅನುಭವ ಹೊಂದಿರುವ ಪವನ್ ವೆಂಕಟೇಶ್, ಈಗ “ಫಸ್ಟ್ ಸ್ಯಾಲರಿ” ಎಂಬ ಕಿರುಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.

ಈ ಕಿರುಚಿತ್ರದಲ್ಲಿ ಹಿರಿಯ ಕಲಾವಿದರಾದ ಹರಿಣಿ ಶ್ರೀಕಾಂತ್ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದು ವಿಜಯ್ ಶಿವಕುಮಾರ್, ಯತಿರಾಜ್,ತ್ರಿಶೂಲ್, ಸ್ನೇಹಶ್ರೀ ಮತ್ತು ರಕ್ಷಿತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀರಾಘವೇಂದ್ರ ಚಿತ್ರವಾಣಿ ಯೂಟೂಬ್‍ನಲ್ಲೇ ಈ ಕಿರುಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.


ಇದು ತಾಯಿಯ ಸೆಂಟಿಮೆಂಟ್ ಆಧರಿಸಿದ ಕಿರುಚಿತ್ರ. ಐದು ದಿನಗಳ ಕಾಲ ಬೆಂಗಳೂರಿನಲ್ಲಿ ಚಿತ್ರೀಕರಣ ಮಾಡಲಾಗಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಕ್ಕೆ ಹೆಚ್ಚು ಕಡಿಮೆ ಒಂದು ತಿಂಗಳು ಆಗಿದೆ. ಕಿರುಚಿತ್ರದಲ್ಲಿ 1 ಹಾಡಿದೆ, ಡಿಐ ಸೇರಿದಂತೆ ಒಟ್ಟಾರೆ ಕಿರುಚಿತ್ರದ ತಯಾರಿಕೆಗೆ 2 ರಿಂದ ಮೂರು ತಿಂಗಳು ಹಿಡಿದಿದೆ .“ಫಸ್ಟ್ ಸ್ಯಾಲರಿ” ಕಿರುಚಿತ್ರ ಒಟ್ಟಾರೆ 24 ನಿಮಿಷದ ಅವಧಿ ಇದೆ.
ನಿರ್ದೇಶನ ತಂಡದಲ್ಲಿ ಮನೋಜ್ ಕುಮಾರ್ ಎಚ್.ಎನ್. ರವಿ ಸಾಸನೂರು ಕೆಲಸ ಮಾಡಿದ್ದು ಪ್ರಚಾರ ಕಲೆ ಮಣಿ ಅವರದು. ವಿಜಯ್ ಶಿವಕುಮಾರ್ ರಚನೆ, ರಿಚರ್ಡ್ ಡ್ಯಾನಿಯಲ್ ಛಾಯಾಗ್ರಾಹಣದ ಜೊತೆಗೆ ಸಂಕಲನ ಮಾಡಿದ್ದು ವಿಜಯ್ ಹರಿತ್ಸ ಸಂಗೀತ ನೀಡಿದ್ಧಾರೆ. ಡಿ.ಎಸ್ ಸುನೀಲ್ ಸುಧೀಂದ್ರ ಮತ್ತು ಡಿ.ಜಿ ವಾಸುದೇವ್ ಪತ್ರಿಕಾ ಸಂಪರ್ಕವಿದ್ದು ಡಿಜಿಟಲ್ ಮಾರ್ಕೆಟಿಂಗ್‍ನಲ್ಲಿ ಚಂದನ ಪ್ರಸನ್ನ ಕಾರ್ಯನಿರ್ವಹಿಸಿದ್ದಾರೆ ಎಂದು ನಿರ್ದೇಶಕ ಪವನ್ ವೆಂಕಟೇಶ್ “ಫಸ್ಟ್ ಸ್ಯಾಲರಿ” ಬಗ್ಗೆ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor