“ಬಾಸ್” ಚಿತ್ರದ ಮೊದಲ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ. Boss movie lyrical song video released.

ಸಿರಿ ಪ್ರೊಡಕ್ಷನ್ಸ್ ನಿರ್ಮಾಣದ, ವಿ.ಲವ ನಿರ್ದೇಶನದಲ್ಲಿ ತನುಷ್ ಶಿವಣ್ಣ ನಾಯಕನಾಗಿ ನಟಿಸಿರುವ “ಬಾಸ್” ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದಿದಿರುವ “ಏನಿದೆಯೊ ನಿನ್ನ ಮಾಯೆ” ಎಂಬ ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡೆಯಾಯಿತು. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಕ್ರೈಮ್ ಥ್ರಿಲ್ಲರ್ ಕಥೆ ಹೊಂದಿರುವ “ಬಾಸ್” ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಬರೆದಿರುವ ಈ ಹಾಡಿಗೆ ಡೆವಿ ಸುರೇಶ್ ಸಂಗೀತ ನೀಡಿದ್ದಾರೆ. ನವೀನ್ ಸಜ್ಜು ಹಾಡಿದ್ದಾರೆ. ಹಾಡು ಬಿಡುಗಡೆಯಾದ ಕ್ಷಣದಿಂದಲೇ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಇನ್ನೂ ಇತ್ತೀಚೆಗೆ ಪ್ರಾದೇಶಿಕ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಿದ್ದು, ಏಪ್ರಿಲ್ ನಲ್ಲಿ ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ ಎಂದರು ನಿರ್ದೇಶಕ ವಿ.ಲವ.

ಆರಂಭದಿಂದಲೂ ಪ್ರೋತ್ಸಾಹ ನೋಡುತ್ತಾ ಬಂದಿರುವ ಪ್ರತಿಯೊಬ್ಬರಿಗೂ ಹಾಗೂ “ಬಾಸ್” ಚಿತ್ರತಂಡಕ್ಕೆ ನಾಯಕ ತನುಷ್ ಶಿವಣ್ಣ ಧನ್ಯವಾದ ಹೇಳಿದರು.ನಾಯಕಿ ಪಾಯಲ್ ಚಂಗಪ್ಪ ಅವರು ಕೂಡ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು.

ಪ್ರತಿಯೊಬ್ಬರಿಗೂ ಒಳ್ಳೆದನ್ನೇ ಬಯಸುವ ವ್ಯಕ್ತಿಯೊಬ್ಬನ ಜೀವನದಲ್ಲಿ ಕಷ್ಟ ಬಂದಾಗ ಆತ ಅನುಭವಿಸುವ ನೋವು ಹಾಗೂ ಪರದಾಟಗಳನ್ನು ಈ ಹಾಡಿನಲ್ಲಿ ಬರೆದಿದ್ದೇನೆ ಎಂದು ಗೀತರಚನೆಕಾರ ಪ್ರಮೋದ್ ಮರವಂತೆ ತಿಳಿಸಿದರು.

ಚಿತ್ರದಲ್ಲಿ ನಟಿಸಿರುವ ವೀರೇನ್ ಕೇಶವ್, ಭೀಷ್ಮ ರಾಮಯ್ಯ, ಲಕ್ಷ್ಮಣ್ ಪೂಜಾರಿ, ಡಾ||ಪ್ರಮೋದ್ ಹಿರೇಮಠ, ಅಕ್ಷಯ್ ಹಾಗೂ ಛಾಯಾಗ್ರಾಹಕ ಶರತ್ ಎನ್ ಆರ್ ಪುರ ಮುಂರಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor