ಮೆಜೆಸ್ಟಿಕ್ ನಂತಹ ಹಿಟ್ಟ್ ಚಿತ್ರಗಳ ನಿರ್ಮಾಪಕ M.G. ರಾಮಮೂರ್ತಿ ನಿರ್ಮಾಪಕರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿ.
ಕನ್ನಡ ಚಿತ್ರರಂಗದಲ್ಲಿ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಿಸಿರುವ ಎಂ.ಜಿ.ರಾಮಮೂರ್ತಿ ಅವರು 2026 ರ ಜನವರಿ 10 ರಂದು ನಡೆಯಲಿರುವ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕಾಗಿ ಸ್ಪರ್ಧಿಸುತ್ತಿದ್ದಾರೆ. ಇತ್ತೀಚೆಗೆ ಎಂ.ಜಿ.ರಾಮಮೂರ್ತಿ ನಾಮಪತ್ರ ಸಲ್ಲಿಸಿದ್ದರು. ಎಂ.ಜಿ.ರಾಮಮೂರ್ತಿ ಅವರ ಅನೇಕ ಮಿತ್ರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.












