“ನಟ ಕೋಮಲ್ ಕುಮಾರ್ ರೋಲೆಕ್ಸ್ ಚಿತ್ರದ ಸ್ಟೈಲಿಶ್ ಲುಕ್ ಗೆ ಅಭಿಮಾನಿಗಳು ಫಿದಾ” ಚಿತ್ರಕ್ಕೆ ಸೆನ್ಸಾರ್ ರವರಿಂದ U/A ಅಸ್ತು .

ಕೋಮಲ್ ಕುಮಾರ್ ಅಭಿನಯದ ಈ ಚಿತ್ರ ಸದ್ಯದಲ್ಲೇ ನಿಮ್ಮ ಮುಂದೆ .

ಮಧು ಫಿಲಂ ಸುರ್ಕ್ಯುಯಿಟ್ಸ್ ಸಂಸ್ಥೆ ಲಾಂಛನದಡಿಯಲ್ಲಿ ಅಂಬಟಿ ಮಧು ಮೋಹನ್ ನಿರ್ಮಿಸಿರುವ, ಶ್ರೀನಿವಾಸ್ ಮಂಡ್ಯ ನಿರ್ದೇಶಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ನಟ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ “ರೋಲೆಕ್ಸ್” ಚಿತ್ರವನ್ನು ಪ್ರಾದೇಶಿಕ ಸೆನ್ಸಾರ್ ಮಂಡಳಿ ವೀಕ್ಷಿಸಿ U/A ಪ್ರಮಾಣಪತ್ರ ನೀಡಿದೆ. ಉತ್ತಮ ಮನೋರಂಜನೆಯ ಚಿತ್ರ ಎಂದು ಸೆನ್ಸಾರ್ ಮಂಡಳಿ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳಾಡಿದೆ. ಬಹು ನಿರೀಕ್ಷಿತ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.

ಥ್ರಿಲ್ಲರ್ ಹಾಗೂ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಯಾವುದೇ ವಯಸ್ಸಿನ ಮಿತಿಯಿಲ್ಲದೆ ಪ್ರತಿಯೊಬ್ಬರು ಕುಟುಂಬ ಸಮೇತ ನೋಡಬಹುದು. ಚಿತ್ರದಲ್ಲಿ ಮನೋರಂಜನೆಯ ಪ್ರಧಾನ.‌ ನೋಡುಗರಿಗೆ ಇದೊಂದು ನಗೆಯ ಹಬ್ಬ. ಈ ಚಿತ್ರದ ಕೋಮಲ್ ಕುಮಾರ್ ಅವರ ಸ್ಟೈಲಿಶ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಯಾವಾಗ ಬಿಡುಗಡೆಯಾಗಬಹುದೆಂದು ಕಾತುರದಿಂದ ಕಾಯುತ್ತಿದ್ದಾರೆ.

ಸೋನಾಲ್ ಮೊಂತೆರೊ ಈ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ವಿಶೇಷಪಾತ್ರದಲ್ಲಿ ವಿನೋದ್ ಪ್ರಭಾಕರ್ ಅಭಿನಯಿಸಿದ್ದಾರೆ. ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ನಮ್ಮ ಚಿತ್ರದಲ್ಲಿದೆ. ಇಡೀ ಚಿತ್ರತಂಡದ ಸಹಕಾರದಿಂದ ನಮ್ಮ ಚಿತ್ರ ಉತ್ತಮವಾಗಿ ಮೂಡಿಬಂದಿದೆ ಎಂದು ನಿರ್ದೇಶಕ ಶ್ರೀನಿವಾಸ್ ಮಂಡ್ಯ ತಿಳಿಸಿದ್ದಾರೆ.

ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಜೆಸ್ಟ್ ಗಿಫ್ಟ್ ಸಂಗೀತ ನೀಡಿದ್ದಾರೆ. ರಾಕೇಶ್ ಸಿ ತಿಲಕ್ ಛಾಯಾಗ್ರಹಣ, ಅರವಿಂದ್ ರಾಜ್ ಅವರ ಸಂಕಲನವಿರುವ ಈ ಚಿತ್ರಕ್ಕೆ ರಾಜೇಶ್ ವರ್ಮ ಕ್ರಿಯೇಟಿವ್ ಹೆಡ್ ಆಗಿ ಹಾಗೂ ಮುರಳಿಕೃಷ್ಣ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor