‘ಹಲ್ಕಾ ಡಾನ್’ ಅಂಗಳಕ್ಕೆ ಎಂಟ್ರಿ ಕೊಟ್ಟ ಬಹುಭಾಷಾ ನಟ ಜಾನ್ ವಿಜಯ್

‘ಟಗರು’, ‘ಸಲಗ’ ಹಾಗೂ ‘ಯುಐ’ ಚಿತ್ರಗಳನ್ನು ನಿರ್ಮಿಸಿರುವ ಕೆ.ಪಿ.ಶ್ರೀಕಾಂತ್ ‘ಹಲ್ಕಾ ಡಾನ್’ ಎಂಬ ಮತ್ತೊಂದು ಚಿತ್ರ ನಿರ್ಮಾಣ ಮಾಡುತ್ತಿರುವುದು ಗೊತ್ತಿರುವ ಸಂಗತಿ. ವೀನಸ್ ಎಂಟರ್‌ಟೈನರ್ ಬ್ಯಾನರ್ ಅಡಿಯಲ್ಲಿ‌ ಮೂಡಿಬರುತ್ತಿರುವ ನಾಲ್ಕನೇ ಚಿತ್ರ ಇದಾಗಿದೆ. ಈ ಸಿನಿಮಾದಲ್ಲಿ ಪ್ರಮೋದ್ ನಾಯಕನಾಗಿ, ಅಮೃತಾ ಅಯ್ಯಂಗಾರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದೀಗ ಹಲ್ಕಾ ಡಾನ್ ಅಂಗಳಕ್ಕೆ ಬಹುಭಾಷಾ ನಟ ಜಾನ್ ವಿಜಯ್ ಎಂಟ್ರಿ ಕೊಟ್ಟಿದ್ದಾರೆ.

ತಮಿಳು, ತೆಲುಗು ಹಾಗೂ ಹಿಂದಿಯ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿರುವ ಜಾನ್ ವಿಜಯ್ ಹಲ್ಕಾ ಡಾನ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅಂದಹಾಗೇ ಜಾನ್ ಈ‌ ಹಿಂದಿ ಪೃಥ್ವಿ ಹಾಗೂ ಗಜಕೇಸರಿ‌ ಸಿನಿಮಾಗಳಲ್ಲಿ ನಟಿಸಿದ್ದರು. ಇದೀಗ ಬಹಳ ವರ್ಷಗಳ ನಂತರ ಮತ್ತೆ ಕನ್ನಡ ಚಿತ್ರರಂಗದತ್ತ ಮುಖ ಮಾಡಿದ್ದಾರೆ. ಸ್ಪೆಷಲ್ ಪೋಸ್ಟರ್ ಮೂಲಕ ಜಾನ್ ವಿಜಯ್ ಅವರನ್ನು ಚಿತ್ರತಂಡ ಸ್ವಾಗತಿಸಿದೆ. ಕೂಲಿಂಗ್ ಗ್ಲಾಸ್ ಹಾಕಿ, ಸಿಗರೇಟ್ ಸಿದುತ್ತಾ ರಗಡ್ ಆಗಿ ಜಾನ್ ಕಾಣಿಸಿಕೊಂಡಿದ್ದಾರೆ.

ಚಿತ್ರಕ್ಕೆ ಚಲ ಈ ಸಿನಿಮಾಗೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಸಿನಿಮಾಗೆ ‘ಸಾಯಿ ಕುಮಾರ್‌ ಫ್ಯಾನ್‌’ ಎಂಬ ಅಡಿಬರಹವಿದ್ದು, ಸಾಯಿಕುಮಾರ್‌ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕನ್ನಡ ಹಾಗೂ ತೆಲುಗಿನಲ್ಲಿ ಏಕಕಾಲಕ್ಕೆ ಈ ಸಿನಿಮಾ ನಿರ್ಮಾಣವಾಗುತ್ತಿದೆ. ವಿ. ಹರಿಕೃಷ್ಣ ಸಂಗೀತ, ಸತ್ಯಾ ಹೆಗಡೆ ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor