ಶ್ರೇಯಾ ಘೋಶಾಲ್ ಧ್ವನಿಯಲ್ಲಿ ‘ನಾದಸುನಾದ’… ‘ಬೃಂದಾವಿಹಾರಿ’ಯಲ್ಲಿ ಸಂಗೀತದ ಸಮ್ಮೋಹನ!
ಶ್ರೇಯಾ ಘೋಶಾಲ್ ಧ್ವನಿಯಲ್ಲಿ ‘ಬೃಂದಾವಿಹಾರಿ’ಯ ನಾದಸುನಾದ!
ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ಅಭಿನಯದ ಬಹುನಿರೀಕ್ಷಿತ ‘ಬೃಂದಾವಿಹಾರಿ’ ಚಿತ್ರದ ‘ನಾದಸುನಾದ’ ಹಾಡು ಬಿಡುಗಡೆಯಾಗಿ ಸದ್ದು ಮಾಡುತ್ತಿದೆ.
ಡಾ. ವಿ. ನಾಗೇಂದ್ರಪ್ರಸಾದ್ ಸಾಹಿತ್ಯ, ಶ್ರೇಯಾ ಘೋಶಾಲ್ ಅವರ ಸುಮಧುರ ಕಂಠ ಹಾಗೂ ಹೇಶಮ್ ಅಬ್ದುಲ್ ವಹಾಬ್ ಅವರ ಸಂಗೀತ ಸಂಯೋಜನೆ ಹಾಡಿನ ಮೆರುಗು ಹೆಚ್ಚಿಸಿದೆ.

ಬಿಡುಗಡೆಯಾದ ಕೆಲವೇ ಹೊತ್ತಿನಲ್ಲಿ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
‘ಕೃಷ್ಣಂ ಪ್ರಣಯ ಸಖಿ’ ಯಶಸ್ಸಿನ ಬಳಿಕ ಗಣೇಶ್ ಹಾಗೂ ನಿರ್ದೇಶಕ ಶ್ರೀನಿವಾಸರಾಜು ಮತ್ತೊಮ್ಮೆ ಒಂದಾಗಿರುವುದು ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ.
ಸಮೃದ್ಧಿ ವಿ. ಮಂಜುನಾಥ್ ನಿರ್ಮಾಣದ ಈ ಚಿತ್ರದಲ್ಲಿ ದೇವಿಕಾ ಭಟ್ ಹಾಗೂ ಮಾಳವಿಕ ಶರ್ಮ ನಾಯಕಿಯರಾಗಿ ಅಭಿನಯಿಸಿದ್ದಾರೆ.

ಗಣೇಶ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ ‘ಬೃಂದಾವಿಹಾರಿ’ ಅಕ್ಟೋಬರ್ 16ರಂದು ತೆರೆಗೆ ಬರಲಿದೆ.








