ರಾಹುಲ್ ಗಾಂಧಿಯವರ ಹುಟ್ಟುಹಬ್ಬದ ಪ್ರಯುಕ್ತ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ
ಲೋಕಸಭಾ ವಿರೋಧಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರಾದ ಶ್ರೀ ರಾಹುಲ್ ಗಾಂಧಿಯವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆಯಾಗಿ ನಾಯಂಡಹಳ್ಳಿ ವಾರ್ಡ್ ನ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಹಾಗೂ ಪುಸ್ತಕಗಳನ್ನು ಶಾಸಕರಾದ ಶ್ರೀ ಪ್ರಿಯಕೃಷ್ಣ ರವರು ವಿತರಿಸಿದರು,

ಈ ಸಂದರ್ಭದಲ್ಲಿ ಶಿಕ್ಷಕರು, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಸದಸ್ಯರು, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.








